![](https://kannadadunia.com/wp-content/uploads/2023/12/Cm-siddaramaiah-4.jpg)
ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಬರಗಾಲ ಸಂದರ್ಭದಲ್ಲಿ ನರೇಗಾ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಗಾ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನರೇಗಾ ಉದ್ಯೋಗ ದಿನಗಳನ್ನು ಹೆಚ್ಚಿಸುವುದರಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ.
ಕುಡಿಯುವ ನೀರು ಸಮಸ್ಯೆ ಕಂಡುಬಂದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಆರಂಭಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು.
ತಾಲ್ಲೂಕುಮಟ್ಟದ ಟಾಸ್ಕ್ ಫೋರ್ಸ್ ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಹೇಳಿದರು.