ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಮಾರ್ಚ್ 10, 2024 ಕೊನೆಯ ದಿನಾಂಕವಾಗಿದೆ.
ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲವಾದ್ದರಿಂದ, ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.