ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗೂ ʻಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆʼ ಅನ್ವಯವಾಗಿದ್ದು, ಬಡವರ ವ್ಯಾಜ್ಯಗಳು ಆರು ತಿಂಗಳಲ್ಲಿ ಇತ್ಯರ್ಥವಾಗಲಿವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಬಡವರು, ಸಣ್ಣ, ಅತಿ ಸಣ್ಣ ರೈತರು, ದುರ್ಬಲ ವರ್ಗದವರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಸೇರಿದ ಸಿವಿಲ್ ವ್ಯಾಜ್ಯಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಆರು ತಿಂಗಳಲ್ಲಿ ಇತ್ಯರ್ಥಗೊಳಿಸುವ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯ್ದೆ ಸೋಮವಾರದಿಂದ ಜಾರಿಯಾಗಿದೆ.
ಕೆಳ ಹಂತದ ನ್ಯಾಯಾಲಯಗಳಿಂದ ಹಿಡಿದು ಹೈಕೋರ್ಟ್‌ವರೆಗಿನ ಎಲ್ಲ ನ್ಯಾಯಾಲಯಗಳಿಗೂ ಈ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.