HomeKarnatakaBIG NEWS: ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಆತಂಕದ ಮೇಲೆ ಆತಂಕ; ಅಂಬಾರಿ ಉತ್ಸವ್ ಬಸ್...

BIG NEWS: ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಆತಂಕದ ಮೇಲೆ ಆತಂಕ; ಅಂಬಾರಿ ಉತ್ಸವ್ ಬಸ್ ಸ್ಫೋಟಿಸುವುದಾಗಿಯೂ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬಳಿಕ ಇನ್ನಷ್ಟು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಿಎಂ, ಡಿಸಿಎಂ, ಗೃಹಸಚಿವರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಅಂಬಾರಿ ಬಸ್ ಬ್ಲಾಸ್ಟ್ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಾಂಬ್ ಬೆದರಿಕೆ ಬಂದಿರುವುದು ನಿಜ. ಸಿಎಂ ಸಿದ್ದರಾಮಯ್ಯ ಹಾಗೂ ನನಗೆ ಮೊನ್ನೆಯೇ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಕಮೀಷ್ನರ್ ಅವರಿಗೆ ತನಿಖೆಗೆ ಸೂಚಿಸಿದ್ದೇವೆ ಎಂದರು.

ಅಲರ್ಟ್-1 ರಲ್ಲಿ ಶಹೀರ್ ಖಾನ್ ಎಂಬಾತನಿಂದ 2.5 ಮಿಲಿಯನ್ ಡಾಲರ್ ಕಳುಹಿಸಬೇಕು. ಇಲ್ಲದಿದ್ದಲ್ಲಿ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಅಲರ್ಟ್-2ರಲ್ಲಿ ಅಂಬಾರಿ ಉತ್ಸವ್ ಬಸ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದೆ. ಇ-ಮೇಲ್ ಪೊಲೀಸರಿಗೆ ರವಾನಿಸಿದ್ದು, ತನಿಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ ಎಸ್ ಆರ‍್ ಟಿಸಿ ಅಂಬಾರಿ ಉತ್ಸವ್ ಬಸ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿರುವುದರಿಂದ ಪ್ರಯಾಣಿಕರಿಗೂ ಆತಂಕ ಶುರುವಾಗಿದೆ. ಬಸ್ ನಿಲ್ದಾಣ ಹಾಗೂ ಅಂಬಾರಿ ಬಸ್ ನಲ್ಲಿ ಕಟ್ಟೆಚ್ಚರವಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular