HomeIndiaBREAKING : ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ʻಅಭಿಜಿತ್ ಗಂಗೂಲಿʼ ಬಿಜೆಪಿಗೆ ಸೇರ್ಪಡೆ

BREAKING : ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ʻಅಭಿಜಿತ್ ಗಂಗೂಲಿʼ ಬಿಜೆಪಿಗೆ ಸೇರ್ಪಡೆ

ಕೋಲ್ಕತಾ : ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಅಭಿಜಿತ್ ಗಂಗೂಲಿ ಮಂಗಳವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ರಾಜೀನಾಮೆ ನೀಡಿದ ನಂತರ, ತಮ್ಮ ಮನೆಯಲ್ಲಿ ಮಾಧ್ಯಮಗಳೊಂದಿಗೆ ಸಂವಾದದ ಸಮಯದಲ್ಲಿ, ನಾನು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಘೋಷಿಸಿದರು, ಏಕೆಂದರೆ ಈ ಪಕ್ಷವು ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ನ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಹೀಗಾಗಿ ಮಾರ್ಚ್ 7 ರಂದು ಅಧಿಕೃತವಾಗಿ ಬಿಜೆಪಿಗೆ ಸೇರುವುದಾಗಿ ಅವರು ಹೇಳಿದರು.

ಕಲ್ಕತ್ತಾ ಹೈಕೋರ್ಟ್‌ ನ್ಯಾಯಧೀಶ ಹುದ್ದೆಗೆ  ಇಂದು  ಬೆಳಿಗ್ಗೆ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದಾರೆ ಮತ್ತು ಅದರ ಪ್ರತಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular