HomeKarnatakaʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ!

ʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ!

 

ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.  

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡುವ ಆತಂಕ ಶುರುವಾಗಿತ್ತು. ಹೀಗಾಗಿ ಇಂಧನ ಇಲಾಖೆ ಈ ಬಗ್ಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಎಸ್‌ ಎಸ್‌ ಎಲ್‌ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ಇಂಧನ ಇಲಾಖೆ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular