HomeKarnatakaKPSC ಅಧ್ಯಕ್ಷರ ವಿರುದ್ಧ ದೂರು ನೀಡಿದ್ದ ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ

KPSC ಅಧ್ಯಕ್ಷರ ವಿರುದ್ಧ ದೂರು ನೀಡಿದ್ದ ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷರ ವಿರುದ್ಧ ಸರ್ಕಾರಕ್ಕೆ ದೂರು ನೀಡಿದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಸ್ಥಾನದಿಂದ ಲತಾ ಕುಮಾರಿಯವರನ್ನು ಬಿಡುಗಡೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸೊಸೈಟಿ ಕಾರ್ಯನಿರ್ವಾಹ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಅವರಿಗೆ ಕೆಪಿಎಸ್‌ಸಿ ಕಾರ್ಯದರ್ಶಿ ಸ್ಥಾನವನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಪಿಎಸ್‌ಸಿ ಕಾನೂನು ಕೋಶದ ಮುಖ್ಯಸ್ಥರ ನೇಮಕದಲ್ಲಿ ಆಯೋಗದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ನಡುವೆ ಒಮ್ಮತವಿಲ್ಲದೇ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿವರೆಗೂ ದೂರು ಸಲ್ಲಿಕೆಯಾಗಿತ್ತು. ಆಯೋಗದ ಸಭೆಗಳಲ್ಲಿ ನಿರ್ಣಯ ಕೈಗೊಳ್ಳುವ ವಿಚಾರದಲ್ಲಿಯೂ ಗೊಂದಲವಾಗಿ ನೇಮಕಾತಿ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಈ ಬೆಳವಣಿಗೆಗಳ ನಂತರ ಕಾರ್ಯದರ್ಶಿ ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular