ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ಸಭೆ ಸೇರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಸಿಇಸಿ ಸದಸ್ಯರಾಗಿರುವ ಯಡಿಯೂರಪ್ಪ ಅವರು ಮಂಗಳವಾರ ಸಭೆಗಾಗಿ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ಇದೆ ಮತ್ತು ನಾನು ಸಭೆಯಲ್ಲಿ ಭಾಗವಹಿಸಲಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಡಾ.ರಾಧಾ ಮೋಹನ್ ದಾಸ್ ಅಗರ್ವಾಲ್ ಅವರೊಂದಿಗಿನ ಸಭೆಯಲ್ಲಿ ಬಹುತೇಕ ಎಲ್ಲಾ 28 ಸ್ಥಾನಗಳ ಅಭ್ಯರ್ಥಿಗಳನ್ನು ಉಸ್ತುವಾರಿಗಳು ಅಂತಿಮಗೊಳಿಸಲಿದ್ದಾರೆ ಎಂದು ಯಡಿಯೂರಪ್ಪ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಮಾರ್ಚ್ 2 ರಂದು 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು.
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಮಾರ್ಚ್ 7 ರಂದು ನವದೆಹಲಿಯಲ್ಲಿ ಸಭೆ ನಡೆಸಲಿದ್ದು, ಅಲ್ಲಿ ಕರ್ನಾಟಕದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಬೆಂಗಳೂರಿನಲ್ಲಿ ಹೇಳಿದರು.