ವಿಜಯಪುರ : ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.
ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ಅಬುಬಕರ್ ಕಂಬಾಗಿ ಎಂಬುವವರು ದೂರು ದಾಖಲಿಸಿದ್ದಾರೆ. ಮಾರ್ಚ್ 4ರಂದು ವಿಜಯಪುರ ನಗರದ ಶಿವಾಜಿ ಸರ್ಕಲ್ನಲ್ಲಿ ನಡೆದಿದ್ದ ಛತ್ರಪತಿ ಶಿವಾಜಿ ಜಯಂತಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲಂ: 153, 506, 504, 505(2) ಐಪಿಸಿ ಅಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಮಾರ್ಚ್ 4ರಂದು ವಿಜಯಪುರ ನಗರದ ಶಿವಾಜಿ ಸರ್ಕಲ್ನಲ್ಲಿ ನಡೆದಿದ್ದ ಛತ್ರಪತಿ ಶಿವಾಜಿ ಜಯಂತಿ ವೇಳೆ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.