alex Certify SHOCKING : ಇಡೀ ರಾಜ್ಯವೇ ಬೆಚ್ಚಿ ಬೀಳುವ ಸುದ್ದಿ : ಬೆಂಗಳೂರಿನ ಆಸ್ಪತ್ರೆಯಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆ ಬಯಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಇಡೀ ರಾಜ್ಯವೇ ಬೆಚ್ಚಿ ಬೀಳುವ ಸುದ್ದಿ : ಬೆಂಗಳೂರಿನ ಆಸ್ಪತ್ರೆಯಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆ ಬಯಲು..!

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು,ಬೆಂಗಳೂರಿನಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆಯಾದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದ್ದು, ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧವಿದ್ದರೂ ಈ ಆಸ್ಪತ್ರೆಯ ವೈದ್ಯರು 73 ಭ್ರೂಣ ಹತ್ಯೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿದಾಗ ಭ್ರೂಣ ಹತ್ಯೆ ದಂಧೆ ನಡೆಸಿರುವುದು ಬಯಲಾಗಿದೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಡಾ. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...