alex Certify ಸಾರ್ವಜನಿಕರೇ ಇತ್ತ ಗಮನಿಸಿ : ಸರ್ಕಾರದ ಈ ನಂಬರ್ ಗೆ ‘ವಾಟ್ಸಾಪ್’ ಮಾಡಿ, ಸಮಸ್ಯೆಗೆ ಪರಿಹಾರ ಪಡೆಯಿರಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಇತ್ತ ಗಮನಿಸಿ : ಸರ್ಕಾರದ ಈ ನಂಬರ್ ಗೆ ‘ವಾಟ್ಸಾಪ್’ ಮಾಡಿ, ಸಮಸ್ಯೆಗೆ ಪರಿಹಾರ ಪಡೆಯಿರಿ..!

ಬೆಂಗಳೂರು : ಗ್ರಾಮೀಣ ಪ್ರದೇಶದ ಜನರು ಕುಳಿತಲ್ಲೇ ನಾನಾ ಸೇವೆಗಳನ್ನು ಪಡೆಯಲು ಹಾಗೂ ತಮ್ಮ ಕುಂದು ಕೊರತೆಗಳನ್ನು ದಾಖಲಿಸುವ ಸಲುವಾಗಿ ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಪೋರ್ಟಲ್ ಹಾಗೂ ವಾಟ್ಸಾಪ್ ಚಾಟ್ ಲೋಕಾರ್ಪಣೆಗೊಳಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ನೀವು https://panchamitra.karnataka.gov.in/ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಸೇವೆಗಳನ್ನು ಪಡೆಯಬಹುದಾಗಿದೆ. 8277506000 ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಪಂಚಮಿತ್ರವು ಕರ್ನಾಟಕ ಗ್ರಾಮ ಪಂಚಾಯತಿಗಳ ಮುಖಪುಟವಾಗಿದ್ದು, ಸಾರ್ವಜನಿಕರ ಮಾಹಿತಿಯ ವೇದಿಕೆಯಾಗಿದೆ. ಯಾವುದೇ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ, ಪಂಚಾಯಿತಿ ಸಿಬ್ಬಂದಿಗಳ, ಗ್ರಾಮ ಪಂಚಾಯಿತಿಯ ಸಭಾ ನಡುವಳಿಗಳು, ಮುಂಬರುವ ಸಭೆಗಳ ದಿನಾಂಕ ಮತ್ತು ಅದರಲ್ಲಿ ಚರ್ಚಿಸುವ ವಿಷಯಗಳು, ಗ್ರಾಮ ಪಂಚಾಯಿತಿಯ ಆದಾಯ, ಇತ್ಯಾದಿ ಮಾಹಿತಿಯನ್ನು ಸಾರ್ವಜನಿಕರು ತಿಳಿಯಬಹುದು.ವಾಟ್ಸಾಪ್ ಚಾಟ್ ಆರಂಭಿಸಲಾಗಿದ್ದು, 8277506000 ಸಂಖ್ಯೆಗೆ ವಾಟ್ಸಾಪ್ ಸಂದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್ ಚಾಟ್ ಆರಂಭಗೊಳ್ಳುತ್ತದೆ.

ಯಾವೆಲ್ಲಾ ಸೇವೆಗಳು ಲಭ್ಯ..?

* ಕಟ್ಟಡ ನಿರ್ಮಾಣ ಪರವಾನಗಿ
*ಹೊಸ ನೀರು ಸರಬರಾಜು ಸಂಪರ್ಕ
* ನೀರು ಸರಬರಾಜಿನ ಸಂಪರ್ಕ ಕಡಿತ
*ಕುಡಿಯುವ ನೀರಿನ ನಿರ್ವಹಣೆ
* ಬೀದಿ ದೀಪದ ನಿರ್ವಹಣೆ
* ಗ್ರಾಮ ನೈರ್ಮಲ್ಯ ನಿರ್ವಹಣೆ
* ವ್ಯಾಪಾರ ಪರವಾನಗಿ
* ಸ್ವಾಧೀನ ಪ್ರಮಾಣ ಪತ್ರ • ರಸ್ತೆ ಅಗೆಯುವುದಕ್ಕಾಗಿ ಅನುಮತಿ • ನಮೂನೆ 9/11
*ನಮೂನೆ 11 ಬಿ
* ನಿರಾಕ್ಷೇಪಣಾ ಪತ್ರ
*ನರೇಗಾ ಅಡಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ
* ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು
* ಕೈಗಾರಿಕೆ, ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ
*ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ
*ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ
* ಹೊಸ/ಅಸ್ತಿತ್ವದಲ್ಲಿರುವ ಓವರ್ ಗೌಂಡ್ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲ
*ಲಭ್ಯ ಸೇವೆಗಳು ಸೌಕರ್ಯಕ್ಕಾಗಿ ಅನುಮತಿ, ನಿಯಮಿತಗೊಳಿಸುವಿಕೆ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...