ಬೆಂಗಳೂರು : ಪೊಲೀಸ್ ಇಲಾಖೆ ನೀಡುವ FSL ವರದಿಗಳೇ ಅಧಿಕೃತ, ಖಾಸಗಿ ಸಂಸ್ಥೆಗಳ ಎಫ್ ಎಸ್ ಎಲ್ ವರದಿಯನ್ನು ಅಧಿಕೃತ ಎಂದು ಹೇಳುವುದಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೀಡಿದ ಎಫ್ ಎಸ್ ಎಲ್ ವರದಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸದ್ಯ, ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೂರು ರೂಪಾಯಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕಟ್ಟಿದರೆ 13 ರೂಪಾಯಿ ಮಾತ್ರ ರಾಜ್ಯಕ್ಕೆ ವಾಪಾಸು ಬರುತ್ತದೆ..! ನಾಡಿಗೆ ಆಗುತ್ತಿರುವ ಈ ಅನ್ಯಾಯವನ್ನು ಪ್ರಶ್ನಿಸಿದರೆ ದೇಶವಿಭಜನೆ ಮಾಡಿದಂತೆ ಆಗುತ್ತದಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅಧಿಕಾರ ಮತ್ತು ಸಮಾಜದ ಸಂಪತ್ತು ಕೆಲವರ ಕೈಯಲ್ಲೇ ಕೇಂದ್ರೀಕೃತ ಆಗಬಾರದು ಎನ್ನುವ ಎಲ್ಲಾ ಸಮಾಜ ಸುಧಾರಕರ ಆಶಯದಂತೆ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇದಕ್ಕಾಗಿ 59,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ. ಗ್ಯಾರಂಟಿ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ 1,20,000 ಕೋಟಿ ಖರ್ಚು ಮಾಡುತ್ತಿದ್ದೇವೆ ಎಂದರು.