ಬೆಳಗಾವಿ : ಟಿಪ್ಪರ್ ಹರಿದು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದಿದೆ. ಮೃತನನ್ನು ಅದೈತ್ ಅಕ್ಷಯ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.