ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಭಾರಿ ಸುಂಟರಗಾಳಿ ಎದ್ದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಜನರು ಗಾಬರಿಗೊಂಡಿದ್ದಾರೆ.
ಸುಂಟರಗಾಳಿ ಏಳುತ್ತಿದ್ದಂತೆ ಜನರು ಎದ್ದು ಹೋಗಲು ಶುರು ಮಾಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನರಿಗೆ ಕುಳಿತುಕೊಳ್ಳಲು ಮನವಿ ಮಾಡಿದರು. ಧಿಡೀರ್ ಆಗಿ ಬೀಸಿದ ಸುಂಟರಗಾಳಿಗೆ ಜನರು ಭಯಬೀತರಾಗಿದ್ದಾರೆ.
ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಟ್ಟಲಗಿ #ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದರು.
ಅವರೊಂದಿಗೆ ಪಾಲ್ಗೊಂಡಿದ್ದೆ. ರೂ.1,486 ಕೋಟಿ ವೆಚ್ಚದ 19 ಸಾವಿರ ಹೆಕ್ಟೇರ್ಗೂ ಅಧಿಕ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.
ಅಥಣಿ ಶಾಸಕರಾದ ಲಕ್ಷ್ಮಣ್ ಎಂ. ಸವದಿ, ಉಪ ಮುಖ್ಯಮಂತ್ರಿಗಳು, ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಚಿವ ಸಂಪುಟದ ಸಹೋದ್ಯೋಗಿಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಆರ್. ಬಿ. ತಿಮ್ಮಾಪುರ, ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ, ಶ್ರೀ ಅಶೋಕ ಪಟ್ಟಣ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಾರಾಷ್ಟ್ರದ ಶಾಸಕರುಗಳಾದ ವಿಶ್ವಜೀತ ಕದಂ, ವಿಕ್ರಂದಾದಾ ಸಾವಂತ್ ಸೇರಿದಂತೆ ಹಲವು ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.