ಗದಗ : ಕ್ಯಾಂಟರ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.
ನವೀನ್ ಕುಂಬಾರ್ (23) ಎಂಬುವವರು ಸ್ಥಳದಲ್ಲಿ ಮೃತಪಟ್ಟಿದ್ದು, ನಾಗಪ್ಪ ಕಾಳಿ (23) ಗಂಗಪ್ಪ (22) ಎಂಬುವವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕ್ಯಾಂಟರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.