ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ ಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಮಾರ್ಚ್, 7 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0821-2515944 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.