ಶಿವಮೊಗ್ಗ: ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.8 ರಂದು ಮಾಂಸ ಮಾರಾಟ ಅಂಗಡಿಗಳ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕೆಂದು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಸೂಚನೆ ನೀಡಿದ್ದಾರೆ.