ಬೆಳಗಾವಿ : ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ ಪಿ) ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎಂಎಸ್ ಪಿ ಜಾರಿಗೊಳಿಸುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.