HomeKarnatakaBIG NEWS : ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

BIG NEWS : ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

‌

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ  ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ  ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಧಾರವಾಡ ಪ್ರವೇಶವನ್ನು ನಿರಾಕರಿಸಿ ಆದೇಶ ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ‌ ಇದೀಗ ನ್ಯಾ. ಎಂ ತ್ರಿವೇದಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಸೂಚಿಸಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಕಾರಣಗಳನ್ನು ನಮೂದಿಸಿ ಇತ್ತೀಚಿಗೆ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular