HomeKarnatakaತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ದಾವಣಗೆರೆ: ಮೀನು ಹಿಡಿಯಲೆಂದು ಹೋಗಿದ್ದ ವ್ಯಕ್ತಿ ತೆಪ್ಪ ಮಗುಚಿಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ.

40 ವರ್ಷದ ಮೂರ್ತಿ ಮೃತ ದುರ್ದೈವಿ. ಕೆರೆಯಲ್ಲಿ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಎಂದಿನಂತೆ ತೆಪ್ಪದಲ್ಲಿ ತೆರಳಿ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ತೆಪ್ಪ ಮಗುಚಿ ಬಿದ್ದ ಪರಿಣಾಮ ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಿಳಚೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular