ಬೆಂಗಳೂರು : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಉಗ್ರನ ಮತ್ತೊಂದು ಫೋಟೋ ರಿವೀಲ್ ಆಗಿದೆ. ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.
ಮಾರ್ಚ್ 1 ರಂದು 11:45 ಕ್ಕೆ ಬಸ್ ಹತ್ತಿದ್ದಾನೆ ಎಂದು ಹೇಳಲಾಗಿದ್ದು, ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಆದರೆ ಮುಖದ ಸ್ಪಷ್ಟವಾದ ಗುರುತು ಸಿಕ್ಕಿಲ್ಲ. ಎಲ್ಲಾ ಸಾಕ್ಷಿಗಳನ್ನು ಇಟ್ಟುಕೊಂಡು ಪೊಲೀಸರು ಹಾಗೂ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.