ಬಸವಕಲ್ಯಾಣ: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದಐತಿಹಾಸಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು.
ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಸಿದ್ದರಾಮಯ್ಯ ಬೃಹತ್ ಸನ್ಮಾನ ಸ್ವೀಕರಿಸಿದರು.
ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.
ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.