ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ ಸೈಬರ್ ಭದ್ರತೆ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಶೀಘ್ರವೇ ಸೈಬರ್ ಭದ್ರತೆ ನಿಯಮ ಜಾರಿಗೆ ತರಲಾಗುವುದು. ಸೈಬರ್ ಅಪರಾಧ ವಿಭಾಗದ ಬಲ ಹೆಚ್ಚಿಸಲು ವಿವಿಧ ತಂತ್ರಜ್ಞಾನ ವಲಯಗಳಲ್ಲಿ ಪರಿಣತಿ ಹೊಂದಿರುವ ಕಂಪೆನಿಗಳ ನೆರವು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಂತ್ರಜ್ಞಾನ ವಲಯಗಳಲ್ಲಿ ಪರಿಣತಿ ಹೊಂದಿರುವ ಕಂಪನಿಗಳ ನೆರವು ಪಡೆದುಕೊಳ್ಳಲಾಗುವುದು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸೈಬರ್ ಅಪರಾಧಿಗಳು ಜಗತ್ತಿನ ಯಾವುದೋ ಪ್ರದೇಶದಲ್ಲಿ ಕುಳಿತುಕೊಂಡು ಇನ್ನೊಂದು ಪ್ರದೇಶದ ಮೇಲೆ ಬೆದರಿಕೆ, ವಂಚನೆ ಸೇರಿದಂತೆ ಇನ್ನಿತರ ಸೈಬರ್ ದಾಳಿ ನಡೆಸುತ್ತಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ವಂಚನೆಗೊಳಗಾದ ಜನರಿಗೆ ಸುರಕ್ಷತೆ ಒದಗಿಸುತ್ತಿವೆ ಎಂದರು.