HomeKarnatakaBREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ...

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿತ್ತು. ಅಭಿಷೇಕ್ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ.

ತುಮಕೂರು ಎಸ್ಪಿ ಅಶೋಕ್ ಕೆ.ವಿ. ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಾಲ ಮಂಜುನಾಥ ಸ್ವಾಮೀಜಿ ಮತ್ತು ಅಭಿಲಾಷ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular