ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಗೀತಾ (26) ಮಗ ಯಶವಂತ್ (6) ಮೃತಪಟ್ಟಿದ್ದಾರೆ.
ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು,ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.