HomeKarnatakaBIG NEWS: ಲೋಕಸಭಾ ಚುನಾವಣೆಯಿಂದ ನಾನು ಹಿಂದೆಸರಿದಿದ್ದೇನೆ ಎಂದ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್

BIG NEWS: ಲೋಕಸಭಾ ಚುನಾವಣೆಯಿಂದ ನಾನು ಹಿಂದೆಸರಿದಿದ್ದೇನೆ ಎಂದ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಾತನಾಡಿದ ಎಂ.ಟಿ.ಬಿ ನಾಗರಾಜ್, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ ನಾಯಕರು ನನಗೆ ಹೇಳಿದ್ದರು. ಆದರೆ ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ತಾರೆ ಎಂದು ಈಗಾಗಲೇ ನಮ್ಮ ವರಿಷ್ಠರು ನಿಗದಿ ಮಾಡಿದ್ದಾರೆ. ಪಕ್ಷದ ವತಿಯಿಂದ ಈಗಾಗಲೇ ಅಭಿಪ್ರಾಯ ಸಂಗ್ರಹಿಸಿ ಸರ್ವೆ ಮಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular