ಕುಣಿಗಲ್ : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡುವ ಆರೋಪ ಕೇಳಿಬಂದಿದ್ದು, ತಾಲೂಕಿನ ಹುಲಿಯೂರುದುರ್ಗ ಹೋಬಳಿ ಯ ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮೀಜಿ ಯನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಲಾಗಿದೆ.
ಗುಪ್ತಾಂಗ ವ್ಯಾಧಿ ವೇಳೆ ವೈದ್ಯರಿಗೆ ತೋರಿಸಿದ ವೀಡಿಯೋ ಇಟ್ಟುಕೊಂಡು ಮಠದ ಮಾಜಿ ಆಪ್ತ ಸಹಾಯಕ ಅಭಿಷೇಕ್ ಹಾಗೂ ಸಹಚರರು ನನ್ನನ್ನು ಬ್ಲಾಕ್ ಮೇಲ್ ಮಾಡುತಿದ್ದಾರೆ ಎಂದು ಸ್ವಾಮೀಜಿ ಅವರು ಆಪ್ತ ಸಹಾಯಕ ಅಭಿಲಾಷ್ ಎಂಬುವರ ಮೂಲಕ ಫೆ.10ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಶ್ರೀಮಠದಲ್ಲಿಬಾಲಕಿ ಯೊಬ್ಬಳಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಮಾಹಿತಿ ಬಯಲಾಗಿದೆ . ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಆರೋಪ ಬಂದಿದೆ.. ಈ ಸಂಬಂಧ ಬಾಲ ಮಂಜುನಾಥ ಸ್ವಾಮೀಜಿ ಹಾಗೂ ಅವರ ಹಾಲಿ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗಠಾಣೆಯಲ್ಲಿಪೋಕ್ಲೋ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ. ಹಾಗೂ ಮಠಕ್ಕೆ ಆಗಮಿಸಿದ ಪೊಲೀಸರು ಕಳೆದ ರಾತ್ರಿ ಮಠದಲ್ಲಿ ಪರಿಶೀಲನೆ ನಡೆಸಿದಾಗ ಸಿಕ್ಕಿದ ಕೆಲವು ದಾಖಲೆಗಳನ್ನು ಆಧರಿಸಿ ಸ್ವಾಮೀಜಿಯವರನ್ನು ಬಂಧಿಸಿದ್ದಾರೆ.