HomeKarnatakaBIG NEWS: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ದುರ್ಮರಣ

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ದುರ್ಮರಣ

ಮೈಸೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ಕಂಡಕ್ಟರ್. ಕೆ ಎಸ್ ಆರ್ ಟಿ ಸಿ ಬಸ್ ಫುಟ್ ಬೋರ್ಡ್ ಮೇಲೆ ನಿಂತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ನಂಜನಗೂದು ಡಿವೈ ಎಸ್ ಪಿ ರಘು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular