ಮೈಸೂರು : ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ, ಮಾಜಿ ಮೇಯರ್ ವಾಸು ಶನಿವಾರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಾಸು ಅವರು ಕೆಲವು ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ವಾಸು ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟಿದ್ದಾರೆ.
ವಾಸು ಅವರು ಮೈಸೂರು ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಮೇಯರ್ ವಾಸು ಎಂದೇ ಫೇಮಸ್ ಆಗಿದ್ದರು. ಮೇಯರ್ ವಾಸು ನಿಧನಕ್ಕೆ ಕಾಂಗ್ರೆಸ್ ಶಾಸಕರು, ಹಲವರು ಸಂತಾಪ ಸೂಚಿಸಿದ್ದಾರೆ.