ಚಿಕ್ಕಬಳ್ಳಾಪುರ : ಶಿವರಾತ್ರಿ ಜಾಗರಣೆಯಂದೇ ಪತಿ ಕಲ್ಲು ಎತ್ತಿಹಾಕಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನರಸಮ್ಮ (45) ಕೊಲೆಯಾದ ಮಹಿಳೆ. ಪತಿ ನರಸಪ್ಪ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಹಿಳೆಗೆ ಚಾಕು ಇರಿದ ಪತಿ ನಂತರ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಪಾತಹಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.