ಕೊಡಗು : ಆಟೋ ಪಲ್ಟಿಯಾಗಿ 8 ತಿಂಗಳ ಹಸುಗೂಸು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ಕಾಫಿ ಕೊಯ್ಲಿಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮಕ್ಕೆ ಬಂದಿದ್ದರು. ಅವರು ತಮ್ಮ ಮಗುವಿನ ಜೊತೆ ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಆಟೋ ಪಲ್ಟಿಯಾಗಿದೆ. ಪರಿಣಾಮ 8 ತಿಂಗಳ ಹಸುಗೂಸು ಅನುರಾಗ್ರಾಜ್ ಸ್ಥಳದಲ್ಲೇ ಮೃತಪಟ್ಟಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.