ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಯಡಿಯೂರಪ್ಪ ದೆಹಲಿಗೆ ತೆರಳಬೇಕಿತ್ತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಕೇಂದ್ರ ನಾಯಕರಾದ ಸಮ್ಮುಖದಲ್ಲಿ ನಡೆಯಬೇಕಿದ್ದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಡಿಢೀರ್ ರದ್ದಾಗಿದೆ ಇಂದು ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ. ರಾಜ್ಯದ 18ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ.
ದೆಹಲಿಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ನಾಯಕರೊಂದಿಗೆ ಸಭೆ ನಡೆಸಿ, ರಾಜ್ಯದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಬೇಕಿತ್ತು. ಕಾರಣಾಂತರದಿಂದ ಯಡಿಯೂರಪ್ಪ ಪ್ರವಾಸ ರದ್ದುಗೊಳಿಸಿದ್ದು, ಶಿವಮೊಗ್ಗದಲ್ಲಿ ಇದ್ದು ಕೆಲಸ ಮುಂದುವರಿಸಲಿದ್ದಾರೆ.
ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಬೇಕಿದ್ದ ಸಭೆ ಕಾರಣಾಂತರಗಳಿಂದ ಮುಂದೂಡಿಕೆಯಾಗಿದ್ದು, ನಾನು ಕೂಡ ದೆಹಲಿ ಭೇಟಿ ರದ್ದುಪಡಿಸಿ ರಾಜ್ಯದಲ್ಲಿ ಇದ್ದು ಕೊಂಡು ಚುನಾವಣಾ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.