ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ದೆಹಲಿ ಪ್ರವಾಸ ರದ್ದಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಭೆ ಕರೆಯಲಾಗಿತ್ತು. ಸಭೆಗೆ ಬರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ ಸಿಇಸಿ ಸಭೆ ಮುಂದೂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ದೆಹಲಿ ಪ್ರವಾಸ ರದ್ದಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ನಾಯಕರು ದೆಹಲಿಗೆ ತೆರಳಲು ಸಜ್ಜಾಗಿದ್ದರು. ಆದರೆ ಕೊನೇ ಗಳಿಗೆಯಲ್ಲಿ ಸಭೆ ರದ್ದಾಗಿದ್ದರಿಂದ ದೆಹಲಿ ಪ್ರವಾಸ ರದ್ದಾಗಿದೆ.