alex Certify ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಯುನಿಲಿವರ್ ಕಂಪನಿಯ ಪ್ರತಿನಿಧಿ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿ ಮಾಲೀಕ ಅರ್ಜುನ್ ಜೈನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮಲ್ಲೇಶ್ವರಂನ ವಿವಿಧ ಅಂಗಡಿಗಳಿಗೆ ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ಪೂರೈಕೆ ಮಾಡುತ್ತಿದ್ದ ವೇಳೆಯಲ್ಲಿ ಆರೋಪಿ ಕಡೆಯವರನ್ನು ವಶಕ್ಕೆ ಪಡೆದು ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ.

ಬಳಿಕ ಮಾದನಾಯಕನಹಳ್ಳಿ ನಡೆಯುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ದಾಳಿಯ ವೇಳೆ 20 ಲಕ್ಷ ರೂಪಾಯಿ ಮೌಲ್ಯದ ಡಿಟರ್ಜೆಂಟ್ ವಸ್ತುಗಳು, ವಿವಿಧ ಕಂಪನಿಯ ಲೇಬಲ್, ಮಿಕ್ಸಿಂಗ್ ಯಂತ್ರಗಳನ್ನು ಜಪ್ತಿ ಮಾಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...