ಕಾರವಾರ: ಸಂವಿಧಾನದ ತಪ್ಪುಗಳನ್ನು ಸರಿಪಡಿಸಲು ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಂವಿಧಾನದಲ್ಲಿ ಕಾಂಗ್ರೆಸ್ ಬೇಡವಾದ ಅಂಶಗಳನ್ನು ಸೇರಿಸಿದೆ. ಅವುಗಳನ್ನು ತೆಗೆಯಲು ನಿಮ್ಮ ಬೆಂಬಲ ಬೇಕು ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಹಲವು ಕಡೆ ಮಾತನಾಡಿದ ಅವರು, ಈ ಬಾರಿ ಪ್ರಧಾನಿ ಮೋದಿ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿದ್ದಾರೆ. ಅವರು ಈ ರೀತಿ ಏಕೆ ಹೇಳಿದ್ದಾರೆಂದರೆ ಕಾಂಗ್ರೆಸ್ ಪಕ್ಷವು ಸಂವಿಧಾನಕ್ಕೆ ಸೇರಿಸಿರುವ ಬೇಡವಾದ ಅಂಶಗಳನ್ನು ತೆಗೆದುಹಾಕಿ ತಪ್ಪುಗಳನ್ನು ಸರಿಪಡಿಸಲು. ಲೋಕಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯ ಎಂದು ತಿಳಿಸಿದ್ದಾರೆ.
ಇದಕ್ಕೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನ ಕುರಿತ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ವೈಯಕ್ತಿಕ ಎಂದು ತಿಳಿಸಿದೆ. ಪಕ್ಷದ ನಿಲುವನ್ನು ಇದು ತೋರಿಸುವುದಿಲ್ಲ. ಹೀಗಾಗಿ ಅವರ ಹೇಳಿಕೆಗೆ ಸ್ಪಷ್ಟನೆ ನೀಡಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾರಿಯಾ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಘಟಕ ಕೂಡ ಅನಂತ್ ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿದ್ದು, ಅದು ಪಕ್ಷದ ನಿಲುವಲ್ಲ ಎಂದು ಸ್ಪಷ್ಟಪಡಿಸಿದೆ.