HomeIndiaನಿಮ್ಮ ಪತಿ ಮೋದಿ ಹೆಸರು ಜಪಿಸಿದರೆ ಊಟ ಹಾಕಬೇಡಿ: ಮಹಿಳಾ ಮತದಾರರಿಗೆ ಸಿಎಂ ಅರವಿಂದ್ ಕೇಜ್ರಿವಾಲ್...

ನಿಮ್ಮ ಪತಿ ಮೋದಿ ಹೆಸರು ಜಪಿಸಿದರೆ ಊಟ ಹಾಕಬೇಡಿ: ಮಹಿಳಾ ಮತದಾರರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

ನವದೆಹಲಿ: ನಿಮ್ಮ ಪತಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಜಪಿಸುತ್ತಿದ್ದಲ್ಲಿ ಅವರಿಗೆ ಊಟ ಹಾಕಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಮಹಿಳಾ ಸಮ್ಮಾನ್ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ನಾಮ ಜಪಿಸಿದರೆ ನಿಮ್ಮ ಪತಿಗೆ ಊಟ ಹಾಕಬೇಡಿ ಎಂದು ಮಹಿಳಾ ಮತದಾರರಿಗೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ಪುರುಷರು ಮೋದಿ ಹೆಸರನ್ನು ಜಪಿಸುವುದು ಹೆಚ್ಚುತ್ತಿದೆ. ನೀವು ಅವರನ್ನು ಸರಿಪಡಿಸುವ ಅಗತ್ಯವಿದೆ. ಹಾಗಾಗಿ ನಿಮ್ಮ ಪತಿ ಮೋದಿ ಎನ್ನುತ್ತಿದ್ದರೆ ಅವರಿಗೆ ಊಟ ನೀಡುವುದಿಲ್ಲ ಎಂದು ಹೇಳಿ ಎಂದು ತಿಳಿಸಿದ್ದಾರೆ.

2024- 25 ರ ದೆಹಲಿ ಸರ್ಕಾರದ ಬಜೆಟ್ ನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ಒಂದು ಸಾವಿರ ರೂ. ಆರ್ಥಿಕ ನೆರವು ಒದಗಿಸುವ ಯೋಜನೆ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಮಹಿಳೆಯರೊಂದಿಗೆ ಕೇಜ್ರಿವಾಲ್ ಸಂವಾದ ನಡೆಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ನಿಮ್ಮ ಕುಟುಂಬದವರ ಮನವೊಲಿಸಿ ಇದು ನಿಮ್ಮ ಜವಾಬ್ದಾರಿ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular