HomeIndiaBIG NEWS: ಸಾಮಾನ್ಯ ಜನರಿಗೂ ಅರ್ಥವಾಗುವ ಸರಳ ಭಾಷೆಯಲ್ಲಿ ತೀರ್ಪು ಬರೆಯಲು ಜಡ್ಜ್ ಗಳಿಗೆ ಸಿಜೆಐ...

BIG NEWS: ಸಾಮಾನ್ಯ ಜನರಿಗೂ ಅರ್ಥವಾಗುವ ಸರಳ ಭಾಷೆಯಲ್ಲಿ ತೀರ್ಪು ಬರೆಯಲು ಜಡ್ಜ್ ಗಳಿಗೆ ಸಿಜೆಐ ಸಲಹೆ

ಜೈಪುರ್: ಸಾಮಾನ್ಯ ಜನರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ಭಾಷೆಯಲ್ಲಿ ತೀರ್ಪು ಬರೆಯುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನ್ಯಾಯಾಧೀಶರಿಗೆ ಕಿವಿಮಾತು ಹೇಳಿದ್ದಾರೆ.

ರಾಜಸ್ಥಾನದ ಬಿಕಾನೇರ್ ನಲ್ಲಿ ಶನಿವಾರ ನಡೆದ ನಮ್ಮ ಸಂವಿಧಾನ ನಮ್ಮ ಗೌರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಜೆಐ ಡಿ.ವೈ. ಚಂದ್ರಚೂಡ್ ಅವರು, ನ್ಯಾಯಾಲಯದ ತೀರ್ಪುಗಳು ಪ್ರಾದೇಶಿಕ ಭಾಷೆಯಲ್ಲಿಯೂ ಲಭ್ಯವಾಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಂಡಿದೆ. ಇದರಿಂದಾಗಿ ಅದೆಷ್ಟೋ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿದೆ. ಆದರೆ ಸಂಕೀರ್ಣತೆಯಿಂದ ಕೂಡಿದ ಕಾನೂನು ಭಾಷೆ ಎಲ್ಲರಿಗೂ ಅರ್ಥವಾಗುವುದಿಲ್ಲ. ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ಭಾಷೆಯಲ್ಲಿ ಜಡ್ಜ್ ಗಳು ತೀರ್ಪು ಬರೆಯಬೇಕು ಎಂದು ಹೇಳಿದ್ದಾರೆ.

ದೇಶದ ಏಕತೆ ಮತ್ತು ಪ್ರಗತಿಯಲ್ಲಿ ಸಂವಿಧಾನದ ಪಾತ್ರ ಮಹತ್ವದ್ದು. ನಾಗರೀಕರ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ನಮ್ಮ ಸಂವಿಧಾನ ನಮ್ಮ ಗೌರವ ಅಭಿಯಾನ ಪೂರಕವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular