ಬೆಂಗಳೂರು : ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ನೈರುತ್ಯ ರೈಲ್ವೆ ಮೂಲಕ ಹಾದು ಹೋಗುವ ವಂದೇ ಭಾರತ್ ರೈಲುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಅಂತಹವರನ್ನು ಪೊಲೀಸರು ಬಂಧಿಸಿದ್ದಾರೆ. ಇದುವರೆಗೆ 50 ಬಾರಿ ಕಲ್ಲು ಎಸೆದ ಪ್ರಕರಣಗಳು ವರದಿ ಆಗಿದ್ದು, ತನಿಖೆ ನಡೆಸಿರುವ ರೈಲ್ವೇ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ.
ದುಷ್ಕರ್ಮಿಗಳು ಪ್ರತಿನಿತ್ಯ ಚಲಿಸುತ್ತಿರುವ ರೈಲಿಗೆ ಕಲ್ಲು ಹೊಡೆಯುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿದ್ದರು. ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ. ರೈಲ್ವೇ ಕಾಯ್ದೆ ಸೆಕ್ಷನ್ 153ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.