ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಇದೇ ಮೊದಲಲ್ಲ. ಈ ಹಿಂದೆಯೂ ಹೇಳಿದ್ದರು. ಆದರೂ ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಿಜೆಪಿಯವರ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರಮೋದಿ ಪ್ರಧಾನಿ ಆಗಿದ್ದ ಆರಂಭದಲ್ಲೇ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ಕೊಟ್ಟಿದ್ದರು. ಬಿಜೆಪಿಯವರು ಯಾವ ಕ್ರಮವನ್ನೂ ಕೈಗೊಂಡಿಲ್ಲ. ಸಂವಿಧಾನ ಬದಲಾವಣೆ ಮಡುವುದು ಬಿಜೆಪಿಯವರ ರಹಸ್ಯ ಅಜೆಂಡಾ ಎಂದು ಹೇಳಿದರು.
ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿಯವರು ದೇಶವನ್ನು ಉದ್ದಾರ ಮಾಡಲ್ಲ, ಸಂವಿಧಾನವನ್ನು ಬದಲಾವಣೆ ಮಾಡ್ತಾರಂತೆ. ಪದೇ ಪದೇ ಅಂತನ್ ಕುಮಾರ್ ಹೆಗಡೆ ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.