ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ.
ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, ಮಾರ್ಕೆಟ್ ನಲ್ಲಿ ದಟ್ಟ ಹೊಗೆ, ಮೆಣಸಿನಕಾಯಿ ಘಾಟಿನಿಂದ ಸಾರ್ವಜನಿಕರ ಉಸಿರಾಟಕ್ಕೆ ತೊಂದರೆಯಾಗಿದೆ. ಕಾರ್ ಗೆ ಬೆಂಕಿ ಹಚ್ಚಲಾಗಿದ್ದು, ಎಪಿಎಂಸಿ ಕಚೇರಿ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ. ಪೀಠೋಪಕರಣ ಹಾನಿ ಮಾಡಲಾಗಿದೆ. ಪ್ರತಿಭಟನಾಕಾರರು, ರೈತರನ್ನು ನಿಯಂತ್ರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದು, ಎಪಿಎಂಸಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮೆಣಸಿನ ಕಾಯಿ ದರ ಕ್ವಿಂಟಾಲ್ ಗೆ 8-10 ಸಾವಿರ ರೂಪಾಯಿ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಗಲಾಟೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.