ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾ.12 ರಂದು ಬೆಳಿಗ್ಗೆ 08 ಗಂಟೆಗೆ ಬಳ್ಳಾರಿ ರೈಲು ನಿಲ್ದಾಣದಲ್ಲಿ ಬಳ್ಳಾರಿ, ಹೊಸಪೇಟೆ ಮತ್ತು ತೋರಣಗಲ್ಲು ರೈಲು ನಿಲ್ದಾಣಗಳ ‘ಒಂದು ನಿಲ್ದಾಣ ಒಂದು ಉತ್ಪನ್ನʼ ಮಳಿಗೆಗಳ ಲೋಕಾರ್ಪಣೆಯನ್ನು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನೆರವೇರಿಸಲಿದ್ದಾರೆ.
ಇದರ ಅಂಗವಾಗಿ ಬಳ್ಳಾರಿ ರೈಲು ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ ಹಾಗೂ ಇತರೆ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹುಬ್ಬಳ್ಳಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.