ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಆಸ್ತಿ ತೆರಿಗೆ 6.5 ರಷ್ಟು ಏರಿಕೆ ಮಾಡಲಾಗುತ್ತಿದೆ.
ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಂಟು ವರ್ಷಗಳ ಬಳಿಕ ಆಸ್ತಿ ತೆರಿಗೆ ಏರಿಕೆ ಮಾಡಲಾಗುತ್ತಿದೆ. ಪರಿಷ್ಕೃತ ದರವು ಏ. 1ರಿಂದ ಜಾರಿಗೆ ಬರಲಿದೆ. ವಸತಿ ಕಟ್ಟಡಗಳಿಗೆ ಶೇ. 20 ಮತ್ತು ವಸತಿಯೇತರ ಕಟ್ಟಡಗಳಿಗೆ ಶೇ 25ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ‘ಬಿ’ ವಲಯದಲ್ಲಿದ್ದ ಆಸ್ತಿಗಳು ‘ಎ’ ವಲಯಕ್ಕೆ ಸೇರಲಿವೆ.
ಇದೀಗ ಹೊಸ ಪದ್ದತಿಯಂತೆ ಆಸ್ತಿ ತೆರಿಗೆ ಹೆಚ್ಚಳದ ಸರಾಸರಿ ಶೇ. 6.5ರಷ್ಟಿದ್ದು, ಎಂಟು ವರ್ಷಗಳಿಗೆ ಹೋಲಿಸಿದರೆ ವಾರ್ಷಿಕ ಶೇ.1ಕ್ಕಿಂತ ಕಡಿಮೆ ಹೆಚ್ಚಳವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಸತಿ ಮತ್ತು ವಸತಿಯೇತರ ಕಟ್ಟಡಗಳು ನಿರ್ಮಾಣಗೊಂಡು ಎಷ್ಟು ವರ್ಷಗಳಾಗಿವೆ ಎಂಬುದರ ಆಧಾರದ ಮೇಲೆ ಆಸ್ತಿ ತೆರಿಗೆ ವಿಧಿಸಲಾಗುತ್ತದೆ.