ಉಡುಪಿ : ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗಡೆ ಇಂದು ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಜಯಪ್ರಕಾಶ್ ಹೆಗಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.
ಜಯಪ್ರಕಾಶ್ ಹೆಗಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಕೊಡಬಾರದು ಎಂದು ಗೋ ಬ್ಯಾಕ್ ಅಭಿಯಾನ ಕೂಡ ನಡೆಸಲಾಗುತ್ತಿದೆ. ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕ್ಷೇತ್ರದಲ್ಲಿ ಕೇಳಿಬರುತ್ತಿದೆ.