ನವದೆಹಲಿ: ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹರಿಯಾಣದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿಕೂಟದಲ್ಲಿ ಬಿರುಕುಗಳು ಉಂಟಾಗಿದ್ದು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಖಟ್ಟರ್ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕೂಡ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ ಮುಖ್ಯಮಂತ್ರಿ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ರಾಜೀನಾಮೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ. ಜೆಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು ಮೈತ್ರಿಯನ್ನು ತೊರೆಯಲು ನಿರ್ಧರಿಸಿರುವುದರಿಂದ ಖಟ್ಟರ್ ಬದಲಿಗೆ ಬಿಜೆಪಿಯ ರಾಜ್ಯ ಅಧ್ಯಕ್ಷ ನಯಾಬ್ ಸೈನಿ ಅಥವಾ ಕರ್ನಾಲ್ ಸಂಸದ ಸಂಜಯ್ ಭಾಟಿಯಾ ಅವರನ್ನು ಆಯ್ಕೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
ಹರಿಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಿದ್ದು, ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ಮೈತ್ರಿ ಮುರಿದು ಬಿದ್ದಿದೆ.