HomeKarnatakaBIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ...

BIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ಪ್ರಸಿದ್ಧ ಬ್ಯಾಡಗಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಗಲಾಟೆಯಾಗಿ 6-7 ಗಾಡಿಗಳನ್ನು ಸುಟ್ಟು ಹಾಕಲಾಗಿದೆ. ಮೆಣಸಿನಕಾಯಿ ರೈತರು ಬೆಲೆ ದಿಢೀರ್ ಕುಸಿತದಿಂದ ಆಘಾತಗೊಂಡಿದ್ದಾರೆ. ಇದರಿಂದ ಗಲಾಟೆ ನಡೆದು ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿ ಬಂಧಿತನಾಗಿರುವ ನಾಶಿಪುಡಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ. ಆದರೆ ಯಾರು ಕರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ವ್ಯಕ್ತಿ ಮಲೆನಾಡಿನವನು ಎಂದು ಹೇಳಲಾಗುತ್ತಿದೆ. ಆತನನ್ನು ಬಂಧಿಸಿ ವಿಚರಣೆ ನಡೆಸಿದಾಗ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular