ಬೆಂಗಳೂರು : 15 ದಿನಗಳಲ್ಲಿ ಕಟ್ಟಡ ನಕ್ಷೆ ಪಡೆಯುವ ʼನಂಬಿಕೆ ನಕ್ಷೆ’ ಯೋಜನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಹೋಗದೆ 15 ದಿನಗಳಲ್ಲಿ ಕಟ್ಟಡ ನಕ್ಷೆ ಪಡೆಯುವ ʼನಂಬಿಕೆ ನಕ್ಷೆʼ- ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗಿದ್ದು, 50×80 ಅಡಿ ಅಳತೆವರೆಗಿನ ಕಟ್ಟಡಗಳಿಗೆ ಆಟೊಮೆಟೆಡ್ ಕಟ್ಟಡ ನಕ್ಷೆಗೆ ಮಂಜೂರಾತಿ 15 ದಿನಗಳಲ್ಲಿ ಸಿಗಲಿದೆ. ಸಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸದೆ ಇದ್ದರೆ ಅಥವಾ ಅರ್ಜಿಯನ್ನು ಪರಿಶೀಲಿಸದೆ ಇದ್ದರೆ 15 ದಿನಗಳಲ್ಲಿ ಸ್ವಯಂ ಚಾಲಿತವಾಗಿ ನಕ್ಷೆ ಮಂಜೂರಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.