ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರತಾಪ್ ಸಿಂಹ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯದುವೀರ್ ಒಡೆಯರ್ ಗೆ ಬಿಜೆಪಿ ಮಣೆ ಹಾಕಲು ಮುಂದಾಗಿದೆ ಎಂಬ ಮಾತು ಕೇಳಿಬಂದಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಯದುವೀರ್ ಒಡೆಯರ್ ಅವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ.
ಇನ್ನು ಮೈಸೂರನ್ನು ಬಿಜೆಪಿ ಭದ್ರಕೋಟೆಯನ್ನಾಗಿ ಮಡಿದ್ದೇ ನಾನು ಎಂದು ಹೇಳಿಕೊಂಡಿದ್ದಾರೆ. ಮೈಸೂರು ನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಹಳೇ ಮೈಸೂರು ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ನಾನು. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತದೆ. ಈ ಹಿಂದೆ ಬಿಜೆಪಿಯಿಂದ ಗೆದ್ದವರು ಪಕ್ಷವನ್ನು ಹೇಗೆ ಕಟ್ಟಿದ್ರು? ಎಷ್ಟು ಜನರನ್ನು ಬೆಳೆಸಿದ್ದಾರೆ ಹೇಳಿ? ಎಂದರು.
ನಾನು ರಿಯಲ್ ಎಸ್ಟೇಟ್ ಮಾಡಿಲ್ಲ. ಕಮಿಷನ್ ಪಡೆಯಲಿಲ್ಲ. ಬಟ್ಟಂಗಿಗಳನ್ನು ಕಟ್ಟಿಕೊಂಡು ಓಡಾಡಿಲ್ಲ. ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ ಅಭಿವೃದ್ದಿ ಮಾತ್ರ ಮಾಡಿದ್ದೇನೆ ಎಂದು ಹ್ಹೇಳಿದರು.
ಇಂದು ನನಗೆ ಟಿಕೆಟ್ ಕೊಟ್ರೆ 3 ಲಕ್ಷ ಮತಗಳ ಅಂತರದಿಂದ ಗೆದ್ದು ಬರುತ್ತೇನೆ. ಆಲ್ ಪಾರ್ಟಿ ಮೇಂಬರ್ ನಾನು. ಒಳ್ಳೆಯ ಕೆಲಸ ಮಾಡಿದ್ದೇನೆ. ಅವಕಾಶ ಸಿಕ್ಕರೆ ಕೊಡಗಿನ ಜನರ ಋಣ ತೀರಿಸುತ್ತೇನೆ. ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ನೀಡಬೇಕೇ ಹೊರತು. ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು. ಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಗಟ್ಟಿಪಿಂಡ ನಾನು ಯಾವ ಹಿನ್ನೆಲೆ ಇಲ್ಲದೇ ಇಲ್ಲಿವರೆಗೆ ಬಂದಿದ್ದೇನೆ. ಲೀದರ್ ಗಳ ಹಿಂದೆ ಹೋಗಬೇಡಿ. ಪಕ್ಷದ ಜೊತೆ ಹೋಗಿ. ನಾನೇ ಆಗಲಿ ಮತ್ತೊಬ್ಬನೇ ಆಗಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಹೇಳಿದರು.