ಬೆಂಗಳೂರು : 43 ಸಿಇಎನ್ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1985 ರಡಿಯಲ್ಲಿ ಡಿವೈಎಸ್ಪಿ ದರ್ಜೆಯ ಅಧಿಕಾರಿಗಳು ತಪಾಸಣೆ ಹಾಗೂ ಜಪ್ತಿ ಕಾರ್ಯ ಕೈಗೊಳ್ಳಬೇಕಿದ್ದು, ಮಾದಕ ದ್ರವ್ಯ ಬಳಕೆ ಮತ್ತು ಸಾಗಟದ ಕುರಿತು ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಕಾರಣ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 43 ಸಿ.ಇ.ಎನ್. ಪೊಲೀಸ್ ಠಾಣೆಗಳಿಗೆ ಮಂಜೂರಾದ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿವೈಎಸ್ಪಿ ಹುದ್ದೆಗಳನ್ನಾಗಿ ಮೇಲ್ದರ್ಜೆಗೇರಿಸುವ ಅವಶ್ಯಕತೆ ಇರುತ್ತದೆಂದು ತಿಳಿಸಿರುತ್ತಾರೆ.
ಈ ಹಿನ್ನೆಲೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಸಿ.ಇ.ಎನ್. ಪೊಲೀಸ್ ಠಾಣೆಗಳ ಮಂಜೂರಾತಿ ಬಲದಿಂದ ತಲಾ 01-ಪಿ.ಎಸ್.ಐ. ಹುದ್ದೆಯನ್ನು ಪಿ.ಐ. ದರ್ಜೆಗೆ ಮೇಲ್ದರ್ಜೆಗೇರಿಸಲು ಹಾಗೂ 43-ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿ.ವೈ.ಎಸ್.ಪಿ. ಹುದ್ದೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶಿಸಿದೆ.