ಶಿವಮೊಗ್ಗ: 5,000 ರೂ. ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ. ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೂರುದಾರರ ಕಾರ್ ಗೆ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಫೈರ್ ರಿಪೋರ್ಟ್ ಬೇಕಿದೆ ಎಂದು ಇನ್ಸೂರೆನ್ಸ್ ಕಂಪನಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್.ಬಿ.ಐ. ಬ್ಯಾಂಕ್ ನಲ್ಲಿ 4000 ರೂ. ಚಲನ್ ಕಟ್ಟಿ ಬಾಂಡ್ ಪೇಪರ್ ನಲ್ಲಿ ಕಾರ್ ಆಕಸ್ಮಿಕವಾಗಿ ಬೆಂಕಿ ತೆಗೆದು ಸಂಪೂರ್ಣ ಸುಟ್ಟು ಹೋಗಿದೆ ಎಂದು ಪ್ರಮಾಣ ಪತ್ರ ಮಾಡಿಸಿಕೊಂಡು ಅಗ್ನಿಶಾಮಕ ಠಾಣೆಗೆ ಫೈರ್ ರಿಪೋರ್ಟ್ ಪಡೆಯಲು ಹೋದಾಗ 5000 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಮಾರ್ಚ್ 12ರಂದು ಲಂಚದ ಮಹಾಲಿಂಗಪ್ಪ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಲಂಚದ ಹಣ ಜಪ್ತಿ ಮಾಡಿ ಅವರನ್ನು ಬಂಧಿಸಿದ್ದಾರೆ. ಪೋಲಿಸ್ ನಿರೀಕ್ಷಕ ಪ್ರಕಾಶ್ ತನಿಖೆ ಕೈಗೊಂಡಿದ್ದಾರೆ.
ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ ಕಚೇರಿ ಪೊಲೀಸ್ ನಿರೀಕ್ಷಕರಾದ ಹೆಚ್.ಎಸ್. ಸುರೇಶ್, ಸಿಬ್ಬಂದಿಗಳಾದ ಮಹಾಂತೇಶ, ಸುರೇಂದ್ರ, ಯೋಗೀಶ್, ಬಿ.ಟಿ. ಚನ್ನೇಶ್, ಪ್ರಶಾಂತಕುಮಾರ್, ಅರುಣ್ ಕುಮಾರ್, ದೇವರಾಜ, ರಘು, ನಾಯ್ಕ, ಪುಟ್ಟಮ್ಮ, ಜಯಂತ, ಪ್ರದೀಪ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.