HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮ್ಯುಟೇಷನ್ ಮಾಹಿತಿ ಸ್ವಯಂ ಪರಿಷ್ಕರಣೆ ಹೊಸ ವ್ಯವಸ್ಥೆ ಜಾರಿ:...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮ್ಯುಟೇಷನ್ ಮಾಹಿತಿ ಸ್ವಯಂ ಪರಿಷ್ಕರಣೆ ಹೊಸ ವ್ಯವಸ್ಥೆ ಜಾರಿ: ಏ. 1 ರಿಂದ ಪಹಣಿಗೆ ಆಧಾರ್ ಜೋಡಣೆ

ಬೆಂಗಳೂರು: ಮ್ಯುಟೇಷನ್ ಮಾಹಿತಿಗಳ ಸ್ವಯಂಚಾಲಿತ ಪರಿಷ್ಕರಣೆ ಹೊಸ ವ್ಯವಸ್ಥೆ ಇಂದಿನಿಂದ ಜಾರಿಯಾಗಲಿದೆ. ಏಪ್ರಿಲ್ 1ರಿಂದ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಗಳಲ್ಲಿ ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಕ್ರಮವನ್ನು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಜನರು ಸಣ್ಣ ಕೆಲಸಗಳಿಗೆ ಗ್ರಾಮಲೆಕ್ಕಿಗ ಸೇರಿ ಇನ್ನಿತರ ಸರ್ಕಾರಿ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯಾಂಕುಗಳಲ್ಲಿ ಸಾಲ ಪಡೆದರೆ, ತೀರಿಸಿದರೆ, ಆಸ್ತಿ ವಿಭಾಗ ಮಾಡಿದರೆ ಅಥವಾ ಒತ್ತೆ ಇಟ್ಟರೆ ಅಂತಹ ಸಂದರ್ಭದಲ್ಲಿ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸಬೇಕು. ಕಂದಾಯ ಅಧಿಕಾರಿ ಬೆರಳಚ್ಚು ಕೊಡಬೇಕು. ಇನ್ನು ಮುಂದೆ ವಿವಿಧ ಮೂಲಗಳಿಂದ ಮಾಹಿತಿ ಪಡೆದು ಸ್ವಯಂ ಚಾಲಿತವಾಗಿ ಮಾಹಿತಿ ಸೇರ್ಪಡೆ ಮಾಡಲಾಗುವುದು. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಿಲ್ಲ ಎಂದು ತಿಳಿಸಿದ್ದಾರೆ.

ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಈಗಾಗಲೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ. 15 ಲಕ್ಷ ಪಹಣಿದಾರರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಲು ಕೋರಲಾಗಿದ್ದು, ಏಪ್ರಿಲ್ 1ರಿಂದ ಅಧಿಕೃತವಾಗಿ ನನ್ನ ಆಸ್ತಿ ಹೆಸರಲ್ಲಿ ನನ್ನ ಭೂಮಿ ನನ್ನ ಗುರುತು ಎಂಬ ಉದ್ದೇಶದೊಂದಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗುವುದು. ರಾಜ್ಯಾದ್ಯಂತ ಗ್ರಾಮ ಲೆಕ್ಕಿಗರು ಪಹಣಿದಾರರ ಮನೆಗೆ ತೆರಳಿ ಆಧಾರ್ ಜೋಡಣೆ ಹಾಗೂ ಅದರ ಅನುಕೂಲವನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular